Forest Department Recruitment – ಅರಣ್ಯ ಇಲಾಖೆ 540 ಅರಣ್ಯ ರಕ್ಷಕರ ನೇಮಕಾತಿ.! ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ ಉದ್ಯೋಗ ಆಕಾಂಕ್ಷೆಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಅರಣ್ಯ ಇಲಾಖೆಯ ಸುಮಾರು 540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಹೊಸ ಅಪ್ಡೇಟ್ ಸಚಿವ ಈಶ್ವರ್ ಕಂಡ್ರೆ ಅವರು ನೀಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಏನು ಬಂದಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಅರಣ್ಯ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿ ಹೊಸ ಅಪ್ಡೇಟ್..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಕೊರತೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನಲ್ಲಿ ಪ್ರಶ್ನೆ ಒಂದಕ್ಕೆ ಉತ್ತರಿಸುವ ಸಂದರ್ಭದಲ್ಲಿ ಸಚಿವ ಈಶ್ವರ್ ಕಂಡ್ರೆ ಅವರು ಈ ರೀತಿಯಾಗಿ ಮಾಹಿತಿ ತಿಳಿಸಿದ್ದಾರೆ.! ಅವರು ತಿಳಿಸಿರುವ ಮಾಹಿತಿಯ ಪ್ರಕಾರ ನಮ್ಮ ಅರಣ್ಯ ಇಲಾಖೆಯಲ್ಲಿ ಸುಮಾರು 540 ಕ್ಕಿಂತ ಹೆಚ್ಚು ಅರಣ್ಯ ರಕ್ಷಕರ ಹುದ್ದೆಗಳು ಖಾಲಿ ಇವೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರವೇ ಅರ್ಜಿ ಪ್ರಕ್ರಿಯೆ ಆರಂಭ ಮಾಡಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ

ಹೌದು ಸ್ನೇಹಿತರೆ 540ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಿ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಉದ್ಯೋಗ ಆಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು
ಮುಂದೆ ಮಾತನಾಡುತ್ತಾ ವನ್ಯಜೀವಿಗಳ ದಾಳಿಯಿಂದ ತುಂಬಾ ಜನರು ಇತ್ತೀಚೆಗೆ ಬಲಿ ಆಗುತ್ತಿದ್ದಾರೆ ಅಂತ ಪ್ರಕರಣಗಳಿಗೆ ಸರ್ಕಾರ ಸ್ಪಂದಿಸಿದೆ ಹಾಗೂ ಕಾಡಾನೆ ದಾಳಿ ಮತ್ತು ಹುಲಿ ದಾಳಿಯಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬಗಳಿಗೆ 20 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಅದೇ ರೀತಿ ಹಾವು ಕಚ್ಚಿ ಸಾವನ್ನಪ್ಪಿದರೆ ಅಂತವರಿಗೆ ಕೃಷಿ ಇಲಾಖೆಯ ಮೂಲಕ ಸುಮಾರು ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಅರಣ್ಯ ರಕ್ಷಕರ ನೇಮಕಾತಿ ಹುದ್ದೆಗಳ ವಿವರ..?
ನೇಮಕಾತಿ ಸಂಸ್ಥೆ:- ಅರಣ್ಯ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 540 ಖಾಲಿ ಹುದ್ದೆಗಳು
ಹುದ್ದೆಗಳ ಹೆಸರು:- ಅರಣ್ಯ ರಕ್ಷಕರ ಹುದ್ದೆಗಳು ಮತ್ತು ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲಿ ಪ್ರಕಟಣೆ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಐನೂರಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ SSLC & ಪಿಯುಸಿ ಪಾಸ್ ಆಗಿರಬೇಕು ಮತ್ತು ಡಿಪ್ಲೋಮೋ ಹಾಗೂ ಐಟಿಐ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ವಯೋಮಿತಿ ಎಷ್ಟು:- ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 500ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿ ದಾರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 27 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಅರ್ಜಿ ಶುಲ್ಕ:- ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾದ ತಕ್ಷಣ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕ ನಿಗದಿ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿಯುತ್ತದೆ ಹಾಗಾಗಿ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ನಾವು ನಿಮಗೆ ಮತ್ತೊಂದು ಲೇಖನೆಯ ಮೂಲಕ ಮಾಹಿತಿ ನೀಡುತ್ತೇವೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಪ್ರಸ್ತುತ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 500ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಹಾಗೂ ಅರ್ಜಿ ಕರೆಯಲಾಗುತ್ತದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಅಧಿಸೂಚನೆ ಬಿಡುಗಡೆಗೊಂಡ ನಂತರ ನಾವು ಮತ್ತೊಂದು ಲೇಖನಿಯ ಮೂಲಕ ಅಪ್ಲಿಕೇಶನ್ ಹಾಕುವ ವಿಧಾನ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂತಾದ ವಿವರಗಳನ್ನು ನಾವು ನಿಮಗೆ ತಿಳಿಸಿ ಕೊಡುತ್ತಿದ್ದೇವೆ
ಆದ್ದರಿಂದ ನೀವು ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದ್ದರೆ, ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
Today Gold Rate Drop – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು.?