ಮಹಿಳೆಯರಿಗೆ ಸರಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಹಾಗೂ ಸರಕಾರದಿಂದ ಹಣಕಾಸು ನೆರವು.! ಈ ಯೋಜನೆಗೆ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಮಹಿಳೆಯರಿಗೆ ಸಾಮಾಜಿಕ ಆರ್ಥಿಕ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ.! ಇದೀಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಸ್ವಂತ ಉದ್ಯೋಗ ಪ್ರಾರಂಭಿಸಲು ಹಾಗೂ ಸ್ವಾವಲಂಬನೆ ಜೀವನ ನಡೆಸಲು ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತರಲಾಗಿದೆ ಈ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತವಾಗಿ ಹೋಲಿಗೆ ಯಂತ್ರ ವಿತರಣೆ ಮತ್ತು ₹15,000/- ಹಣಕಾಸು (Money) ನೆರವು ಈ ಒಂದು (Yojana) ಯೋಜನೆಯ ಮೂಲಕ ನೀಡಲಾಗುತ್ತದೆ
ಹೌದು ಸ್ನೇಹಿತರೆ ನಾವು ಈ ಒಂದು ಲೇಖನಿಯ ಮೂಲಕ ಈ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಮಹಿಳೆಯರು ಯಾವ ಅರ್ಹತೆ ಹೊಂದಿರಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಮತ್ತು ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು ಎಂಬ ವಿವರದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಲೇಖನಿಯನ್ನು ಕೊನೆವರೆಗೂ ಓದಿ..
ಉಚಿತ ಹೊಲಿಗೆ ಯಂತ್ರ ಯೋಜನೆಯ ವಿವರಗಳು..?
ಸ್ನೇಹಿತರ ಕೇಂದ್ರ ಸರ್ಕಾರ ಮಹಿಳೆಯರಿಗೆ ಅದರಲ್ಲಿ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಮಹಿಳೆಯರಿಗೆ ಸಾಮಾಜಿಕ ಭದ್ರತೆ ಹಾಗೂ ಆರ್ಥಿಕ ಭದ್ರತೆ ಕಲ್ಪಿಸುವ ಉದ್ದೇಶದಿಂದ ಹಾಗೂ ಸ್ವಂತ ಉದ್ಯೋಗ ಮಾಡಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತರಲಾಗಿದೆ.!

ಪಿಎಂ ವಿಶ್ವಕರ್ಮ ಯೋಜನೆಯಮೂಲಕ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ (Apply online) ಉಚಿತ ಹೊಲಿಗೆ ಯಂತ್ರ ಹಾಗೂ ₹15,000/ ಹಣಕಾಸು (Money) ನೆರವು ಮತ್ತು ಸಾಲ ಸೌಲಭ್ಯ (Loan) ಈ ಒಂದು ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ ಹಾಗೂ ಈ ಯೋಜನೆಗೆ ಮಹಿಳೆಯರು ಹಾಗೂ ಪುರುಷರು ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು..
ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಯ ಪ್ರಮುಖ ಉದ್ದೇಶ ಗ್ರಾಮೀಣ ಭಾಗದಲ್ಲಿ ಇರುವ ಮಹಿಳೆಯರು ಹಾಗೂ ಪುರುಷರಿಗೆ ಸ್ವಂತ ಉದ್ಯೋಗ ಮಾಡಲು ಆರ್ಥಿಕ ನೆರವು ನೀಡುವ ಜೊತೆಗೆ ವಂಶ ಪಾರಂಪಾರಿಕವಾಗಿ ಮಾಡಿಕೊಂಡು ಬಂದಿರುವ ವೃತ್ತಿಗಳಿಗೆ ಆರ್ಥಿಕ ಭದ್ರತೆ ಕಲ್ಪಿಸುವುದು ಈ ಒಂದು ಯೋಜನೆಯ ಉದ್ದೇಶವಾಗಿದೆ..
ಆದ್ದರಿಂದ ನಾವು ಈ ಒಂದು ಲೇಖನಿಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಿಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಕೆಳಗಡೆ ನೀಡಿದ್ದೇವೆ
ಪಿಎಂ ವಿಶ್ವಕರ್ಮ ಯೋಜನೆಯ ಪ್ರಯೋಜನಗಳು..?
ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಯ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಈ ಕೆಳಕಂಡ ಎಲ್ಲಾ ಪ್ರಯೋಜನಗಳು ಸಿಗಲಿದೆ
ಉಚಿತ ಹೊಲಿಗೆ ಯಂತ್ರ ವಿತರಣೆ:- ಹೌದು ಸ್ನೇಹಿತರೆ ಈ ಯೋಜನೆ ಅಡಿಯಲ್ಲಿ ಆಯ್ಕೆಯಾದಂತಹ ಮಹಿಳೆಯರಿಗೆ ಹಾಗೂ ಪುರುಷರಿಗೆ ಉಚಿತವಾಗಿ ಒಂದು ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತದೆ
ಕೌಶಲ್ಯ ತರಬೇತಿ:- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರಿಗೆ ಹಾಗೂ ಪುರುಷರಿಗೆ ಹೊಲಿಗೆ ಯಂತ್ರ ಅಥವಾ ವೃತ್ತಿಗೆ ಸಂಬಂಧಿಸಿದ ಯಾವುದೇ ಟೂಲ್ ಕಿಟ್ ಖರೀದಿಗೆ 15,000 ಹಣ ಪಡೆದುಕೊಳ್ಳಬಹುದು ಹಾಗೂ ವಂಶ ಪಾರಂಪರಿಕವಾಗಿ ಮಾಡಿಕೊಂಡು ಬಂದಿರುವ ವೃತ್ತಿಗಳಿಗೆ ಮತ್ತು ಇತರ ಸ್ವಂತ ಉದ್ಯೋಗ ಅಥವಾ ಇತರ ಯಾವುದೇ ಉದ್ಯೋಗ ಮಾಡಲು 7 ದಿನಗಳವರೆಗೆ ಕೌಶಲ್ಯ ತರಬೇತಿ ನೀಡಲಾಗುತ್ತದೆ ಹಾಗೂ ಪ್ರತಿದಿನ 500 ರೂಪಾಯಿಯಂತೆ ದಿನಕ್ಕೆ ಕೂಲಿ ನೀಡಲಾಗುತ್ತದೆ
3 ಲಕ್ಷ ರೂಪಾಯಿವರೆಗೆ ಸಾಲ:- ಹೌದು ಸ್ನೇಹಿತರೆ ತರಬೇತಿ ಪೂರ್ಣಗೊಂಡ ನಂತರ ಈ ಒಂದು ಯೋಜನೆ ಅಡಿಯಲ್ಲಿ ಉದ್ಯೋಗ ಮಾಡಲು ಸುಮಾರು 2 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ ಶೇಕಡ 5% ರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಬ್ಯಾಂಕ್ ಗಳ ಮೂಲಕ ಒದಗಿಸಲಾಗುತ್ತದೆ
ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು.?
- ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯಸ್ಸು 18 ರಿಂದ 50 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಕೆ ಮಾಡಬಹುದು
- ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು
- ಈ ಯೋಜನೆಗೆ ಮಹಿಳೆಯರು ಹಾಗೂ ಪುರುಷರು ಅರ್ಜಿ ಸಲ್ಲಿಕೆ ಮಾಡಬಹುದು
- ಈ ಯೋಜನೆಗೆ ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
- ಅರ್ಜಿದಾರರು ವರ್ಷಕ್ಕೆ 2.5 ಲಕ್ಷ ರೂಪಾಯಿಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು
ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ವಯಸ್ಸಿನ ಪುರಾವೆ (ಜನನ ಪ್ರಮಾಣ ಪತ್ರ ಅಥವಾ ಶಾಲೆಯ ಟಿಸಿ)
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಎರಡು ಪಾಸ್ಪೋರ್ಟ್ ಸೈಜ್ ಫೋಟೋಸ್
- ಬ್ಯಾಂಕ್ ಖಾತೆಯ ವಿವರಗಳು
- ಮೊಬೈಲ್ ನಂಬರ್
- ಅಂಗವಿಕಲತೆ ಅಥವಾ ವಿಧುವತ್ವ ಪ್ರಮಾಣ ಪತ್ರ ಇದ್ದರೆ ಮಾತ್ರ
- ಇತರೆ ಅಗತ್ಯ ದಾಖಲಾತಿಗಳು
ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ನಂತರ ಅಲ್ಲಿ ಅಪ್ಲೈ ನೌ ಎಂಬ ಬಟನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಬಳಸಿಕೊಂಡು ಈ ಒಂದು ಪೋರ್ಟಲ್ ಗೆ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ಅರ್ಜಿ ಫಾರಂನಲ್ಲಿ ನಿಮ್ಮ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
- ಹಾಗೂ ಅರ್ಜಿ ಸಲ್ಲಿಕೆ ಮಾಡಿದ ಅರ್ಜಿ ಪ್ರಿಂಟ್ ಔಟ್ ತೆಗೆದುಕೊಳ್ಳಿ
ಒಂದು ವೇಳೆ ಆಫ್ ಲೈನ್ ಮೂಲಕ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಉದಾಹರಣೆ CSC ಕೇಂದ್ರ, ಗ್ರಾಮ್ ಒನ್, ಹಾಗೂ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ ತಕ್ಷಣ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಿ
Leave a Reply