infosys stem stars scholarship 2025; – ಇನ್ಫೋಸಿಸ್ ಸಿಸ್ಟಮ್ ಸ್ಟಾರ್ಸ್ ವಿದ್ಯಾರ್ಥಿ ವೇತನ | ವರ್ಷಕ್ಕೆ 1 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗುತ್ತೆ
ನಮಸ್ಕಾರ ಗೆಳೆಯರೇ ಇನ್ಫೋಸಿಸ್ ಫೌಂಡೇಶನ್ stem ಇದೀಗ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಗಣಿತ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಪದವಿ ಪೂರ್ವ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ನೀಡುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳ ವಿವರ ತಿಳಿದುಕೊಳ್ಳೋಣ
ಇನ್ಫೋಸಿಸ್ STEM Stars ವಿದ್ಯಾರ್ಥಿ ವೇತನ..?
ಸ್ನೇಹಿತರೆ ಇನ್ಫೋಸಿಸ್ ಸಂಸ್ಥೆ ನಮ್ಮ ಭಾರತದಲ್ಲಿ ಅತ್ಯಂತ ದೊಡ್ಡ ಟೆಕ್ ಸಂಸ್ಥೆಯಾಗಿದ್ದು ಈ ಸಂಸ್ಥೆ ಭಾರತದಲ್ಲಿ ಸಮಾಜದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ 2025 ಮತ್ತು 26 ನೇ ಸಾಲಿನಲ್ಲಿ ಇನ್ಫೋಸಿಸ್ ಪೌಂಡೇಶನ್ stem ಸ್ಟಾರ್ಸ್ ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು..

ಈ ವಿದ್ಯಾರ್ಥಿ ವೇತನವು ವಿದ್ಯಾರ್ಥಿಗಳಿಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವರ್ಷಕ್ಕೆ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬರುವ ಅರ್ಹತೆಗಳ ಬಗ್ಗೆ ಇದೀಗ ಮಾಹಿತಿ ತಿಳಿಯೋಣ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?
- ಅರ್ಜಿ ಸಲ್ಲಿಸಲು ವಿದ್ಯಾರ್ಥಿನಿಯರಿಗೆ ಮಾತ್ರ ಅವಕಾಶ
- ಅರ್ಜಿದಾರರು 12ನೇ ತರಗತಿ ಪೂರ್ಣಗೊಳಿಸಿರಬೇಕು
- ಅರ್ಜಿದಾರರು STEM ಸಂಬಂಧಿತ ಕೋರ್ಸ್ ಗಳಲ್ಲಿ ಪ್ರತಿಷ್ಠಿತ NIRF ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ಕೋರ್ಸ್ ಗಳಲ್ಲಿ ದಾಖಲಾಗಿರಬೇಕು
- ಅರ್ಜಿದಾರ ವಿದ್ಯಾರ್ಥಿಯ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು
- NIRF ಪ್ರಿಯಾಂಕದಲ್ಲಿ ಸರಕಾರಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು
ಸ್ಕಾಲರ್ಶಿಪ್ ಹಣ ಎಷ್ಟು ಸಿಗುತ್ತೆ..?
ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕೋರ್ಸ್ ಅವಧಿಗೆ ಅಥವಾ ಗರಿಷ್ಠ ನಾಲ್ಕು ವರ್ಷದವರೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ಈ ಒಂದು ಸ್ಕಾಲರ್ಶಿಪ್ ಮೂಲಕ ಪಡೆಯಬಹುದು..
ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿನಿಯರು ಈ ಒಂದು ಸ್ಕಾಲರ್ಶಿಪ್ 15 ಸೆಪ್ಟೆಂಬರ್ 2025ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಹಿಂದಿನ ತರಗತಿಯ ಅಂಕಪಟ್ಟಿಗಳು
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಕಾಲೇಜು ರಶೀದಿ
- ಕಾಲೇಜು ಗುರುತಿನ ಚೀಟಿ
- ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿನಿಯರ ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (How To Apply online infosys stem stars scholarship 2025).?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಸಂಸ್ಥೆ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ವಿವರವನ್ನು ಮೊದಲು ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಪಡೆಯಲು ತಕ್ಷಣ ನಮ್ಮ ವಾಟ್ಸಪ್ ಚಾನಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳು ಸೇರಿಕೊಳ್ಳಬಹುದು
Leave a Reply