RRC Apprentice Recruitment 2025 – ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ.! 2418 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ,
ನಮಸ್ಕಾರ ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆಯ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅತಿ ಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಯಾವ ರೀತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿ ಸಲ್ಲಿಕೆ ಮಾಡಲು ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ (RRC Apprentice Recruitment 2025 apply online).?
ಹೌದು ಸ್ನೇಹಿತರೆ, ನಮ್ಮ ಭಾರತೀಯ ರೈಲ್ವೆ ಇಲಾಖೆ ನಮ್ಮ ದೇಶದ ಅತಿ ದೊಡ್ಡ ಉದ್ಯೋಗ ಒದಗಿಸುವ ಸಂಸ್ಥೆಯಾಗಿದೆ ಈ ಸಂಸ್ಥೆ ನಮ್ಮ ಭಾರತ ದೇಶದ ಅನೇಕ ಯುವಕ ಮತ್ತು ಯುವತಿಯರಿಗೆ ಉದ್ಯೋಗ ನೀಡುತ್ತಿದೆ.! ಇದೀಗ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತೀಯ ರೈಲ್ವೆ ಇಲಾಖೆ RRC/CR ಗೆ ಸಂಬಂಧಿಸಿದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ

ಹೌದು ಸ್ನೇಹಿತರ ಭಾರತೀಯ ರೈಲ್ವೆ ಇಲಾಖೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 2,418 ಕಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಆಸಕ್ತಿ ಇರುವವರು 11 ಸೆಪ್ಟೆಂಬರ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.! ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ವಿವರ ತಿಳಿದುಕೊಳ್ಳೋಣ
ಭಾರತೀಯ ರೈಲ್ವೆ ಇಲಾಖೆ ನಿಯಮಕಾತಿ ವಿವರಗಳು (RRC Apprentice Recruitment 2025 Details).?
ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 2,418 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅಧಿಕೃತ ವೆಬ್ ಸೈಟ್:- www.rrccr.com
ಅರ್ಜಿ ಪ್ರಾರಂಭ ದಿನಾಂಕ:- 11/08/2025
ಅರ್ಜಿ ಕೊನೆಯ ದಿನಾಂಕ:: 11/09/2055
ಹುದ್ದೆಗಳು:- ವಿವಿಧ ಹುದ್ದೆಗಳು
ಉದ್ಯೋಗ ಸ್ಥಳ:- ಪುಣೆ, ಮುಂಬೈ, ಭೂಸಾವಲ್, ನಾಗಪುರ ಮತ್ತು ಸೋಲಾಪುರ ಕ್ಲಸ್ಟರ್ ಗಳ ವಿವಿಧ ಘಟಕಗಳಲ್ಲಿ ಉದ್ಯೋಗ
ಖಾಲಿ ಹುದ್ದೆಗಳ ವಿವರ:-
1) ಮುಂಬೈ ಕ್ಲಸ್ಟರ್:- 1634 ಖಾಲಿ ಹುದ್ದೆಗಳು
2) ಪುಣೆ ಕ್ಲಸ್ಟರ್:- 175 ಖಾಲಿ ಹುದ್ದೆಗಳು
3) ನಾಗಪುರ ಕ್ಲಸ್ಟರ್:- 144 ಖಾಲಿ ಹುದ್ದೆಗಳು
4) ಸೋಲಾಪುರ ಕ್ಲಸ್ಟರ್:- 60 ಖಾಲಿ ಹುದ್ದೆಗಳು
5) ಭೂಸಾವಲ್ ಕ್ಲಸ್ಟರ್:- 418 ಖಾಲಿ ಹುದ್ದೆಗಳು
ರೈಲ್ವೆ ಇಲಾಖೆ ಹುದ್ದೆಗಳಿಗೆ (RRC Apprentice Recruitment 2025 eligibility) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 2,418 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಮತ್ತು ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಇದರ ಜೊತೆಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ITI ಪಾಸ್ ಆಗಿರುವ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಇತರ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 15 ವರ್ಷ ವಯೋಮಿತಿ ಒಂದರಬೇಕು ಮತ್ತು ಗರಿಷ್ಠ ವಯೋಮಿತಿ 24 ವರ್ಷ ನಿಗದಿ ಮಾಡಲಾಗಿದೆ ಹಾಗೂ ಸರಕಾರದ ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಐದು ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಮತ್ತು ಇದರ ಜೊತೆಗೆ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಮತ್ತು ಪಿ ಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ 10 ವಯೋಮಿತಿ ಸಡಿಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ:- ಭಾರತೀಯ ರೈಲ್ವೆ ಇಲಾಖೆಯ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗಕ್ಕೆ ಸೇರಿದರೆ ಕನಿಷ್ಠ ₹100/- ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು ಮತ್ತು ಉಳಿದ ವರ್ಗಕ್ಕೆ ಸೇರಿದ ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆಯ ವಿಧಾನ:- ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ RRC/CR ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹತ್ತನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಭಾರತೀಯ ರೈಲ್ವೆ ಇಲಾಖೆಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (RRC Apprentice Recruitment 2025 apply online).?
ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಪ್ರತಿದಿನ ಇದೇ ರೀತಿ ನಿಮಗೆ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಲಿ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು