SSP Scholarship 2025; – SSP ಸ್ಕಾಲರ್ಶಿಪ್ ಯೋಜನೆ ಅರ್ಜಿ ಪ್ರಾರಂಭ.! ತಕ್ಷಣ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ (Welcome) ಕರ್ನಾಟಕ ರಾಜ್ಯ ಸರ್ಕಾರ ಇದೀಗ ಹತ್ತನೇ ತರಗತಿಯ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.! ಹೌದು ಗೆಳೆಯರೇ ಮೆಟ್ರಿಕ್ ನಂತರದ ವಿವಿಧ ಇಲಾಖೆಯ ಅಡಿಯಲ್ಲಿ ಎಸ್ ಎಸ್ ಪಿ ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ..
ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಯಾವ ಇಲಾಖೆಯ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ನಾವು ಈ ಒಂದು ಲೇಖನಿಯ ಮೂಲಕ ವಿವರ ತಿಳಿದುಕೊಳ್ಳೋಣ..
ಎಸ್ ಎಸ್ ಪಿ ವಿದ್ಯಾರ್ಥಿ ವೇತನ (SSP Scholarship 2025).?
ನಮ್ಮ ಕರ್ನಾಟಕ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಾಗೂ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಯಾವುದೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಅಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಎಸ್ ಎಸ್ ಪಿ ಆನ್ಲೈನ್ ಪೋರ್ಟಲ್ ಪ್ರಾರಂಭ ಮಾಡಿದೆ.! ಇದೀಗ ಈ ಒಂದು ಪೋರ್ಟಲ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ

ಇದೀಗ ಮೆಟ್ರಿಕ್ ನಂತರದ ಅಂದರೆ ಹತ್ತನೇ ತರಗತಿಯ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಎಸ್ ಎಸ್ ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SSP Scholarship 2025).?
ಸ್ನೇಹಿತರೆ ಇದೀಗ ಮೆಟ್ರಿಕ್ ನಂತರದ ಅಂದರೆ ಹತ್ತನೇ ತರಗತಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಐಟಿಐ, ಪದವಿ ಮತ್ತು ಇತರೆ ಯಾವುದೇ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ..
ಹೌದು ಸ್ನೇಹಿತರೆ ಕೆಲವು ಇಲಾಖೆಗಳ ಅಡಿಯಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮುಕ್ತಾಯಗೊಂಡಿದೆ ಹಾಗಾಗಿ ಪ್ರಸ್ತುತ ಕೆಳಗಡೆ ನೀಡಿದ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು (SSP Scholarship 2025 Apply Last Date) ಕೊನೆಯ ದಿನಾಂಕ ಯಾವಾಗ..?
ಸ್ನೇಹಿತರೆ ಇದೀಗ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಇಲಾಖೆಯ ಅಡಿಯಲ್ಲಿ ಬಂದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರವೂ ಕೂಡ ನೀಡಿದ್ದೇವೆ
ಹಿಂದುಳಿದ ಕಲ್ಯಾಣ ಇಲಾಖೆ;- SSLC ನಂತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು (BCWD) ಹಿಂದುಳಿದ ಕಲ್ಯಾಣ ಇಲಾಖೆಯ (Apply online) ಅಡಿಯಲ್ಲಿ ಬರುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ಸೆಪ್ಟೆಂಬರ್ 2025 ಆಗಿದೆ
ಆರ್ಯವೈಶ್ಯ ಇಲಾಖೆ (Kacdc); – SSLC ನಂತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು (Scholarship) ಆರ್ಯ ವೈಶ್ಯ ಇಲಾಖೆ (Kacdc) ಇಲಾಖೆಯ ಅಡಿಯಲ್ಲಿ ಬರುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ನವೆಂಬರ್ 2025 ಆಗಿದೆ
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ (KSBDB) – SSLC ನಂತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ (KSBDB) ಅಡಿಯಲ್ಲಿ ಬರುತ್ತಿದ್ದರೆ ಈ ಒಂದು (Apply online) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30 ನವೆಂಬರ್ 2025 ಆಗಿದೆ
ಅರ್ಜಿ ಸಲ್ಲಿಕೆಗೆ (SSP Scholarship 2025 Apply Documents) ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಕಾಲೇಜು ಪ್ರವೇಶ ರಸೀದಿ
- ಕಾಲೇಜು ದೃಢೀಕರಣ ಪ್ರಮಾಣ ಪತ್ರ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಹಿಂದಿನ ತರಗತಿಯ ಅಂಕಪಟ್ಟಿಗಳು
- ಇತರೆ ಅಗತ್ಯ ದಾಖಲಾತಿಗಳು
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ ( How To Apply online SSP Scholarship 2025).?
ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎಸ್ ಎಸ್ ಪಿ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲೀಗ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಪಡೆಯಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಭೇಟಿ ನೀಡಬಹುದು
Today Gold Price Drop – ಸತತ 5 ದಿನದ ನಂತರ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು.?